(ನ್ಯೂಸ್ ಕಡಬ) newskadaba.com ಉಡುಪಿ, ನ.12. ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟನಾಗಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಅವರು ಉಡುಪಿಯ ಕಾಪು ಪೇಟೆಯಲ್ಲಿ ಭಾನುವಾರ ನಡೆದ ಪರಿವರ್ತನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾವಣ ಸೀತೆಯ ಅಪಹರಣ ಮಾತ್ರ ಮಾಡಿದ್ದ ಆದರೆ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆದು ಗೋ ಹತ್ಯೆಗೆ ಬೆಂಬಲವಾಗಿ ನಿಲ್ಲುತ್ತಿದ್ದಾನೆ. ಹಿಂದೂ ಸಂಸ್ಕೃತಿ ನಾಶ ಮಾಡಲು ಸಿದ್ದರಾಮಯ್ಯ ಹೊರಟಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿದ್ದಾನೆ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನ ಅಧಿಕಾರ ಮೂರು ತಿಂಗಳಿಗೆ ಮುಗಿಯುತ್ತದೆ. ನಂತರ ಯಡಿಯೂರಪ್ಪ ರಾಮಭಕ್ತನಾಗಿ ಬಂದು ರಾಜ್ಯದಲ್ಲಿ ಸವಾರಿ ಮಾಡುತ್ತಾನೆ. ಸಿದ್ದರಾಮಯ್ಯನಿಗೆ ಯಡಿಯೂರಪ್ಪನಿಂದಾಗಿ ಮುಕ್ತಿ ಸಿಗುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ಪುರಾಣದ ಕಥೆಗೆ ಹೋಲಿಸಿದರು.
ಮುಖ್ಯಮಂತ್ರಿಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವುದರಿಂದ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.