ಮಂಗಳೂರು: ಗೋಹತ್ಯೆ ಆರೋಪದ ಹಿನ್ನೆಲೆ ➤ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನ ಆಸ್ತಿ ಮುಟ್ಟುಗೋಲು ಹಾಕಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ.

ಆರೋಪಿಯನ್ನು ಬಾತೀಶ್ ಎಂದು ಗುರುತಿಸಲಾಗಿದೆ. ಈತ ಅಕ್ರಮವಾಗಿ ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ವಶಪಡಿಸಿಕೊಂಡಿದ್ದರು. ಆರೋಪಿಯು ಎ ಕೆ ಖಾಲಿದ್ ಎಂಬುವರ ಮನೆಯ ಪಕ್ಕದ ಶೆಡ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ನಡೆಸುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇನ್ನು ಆರೋಪಿಯು ಯಾವುದೇ ಅನುಮತಿಯಿಲ್ಲದೆ ಜಾನುವಾರುಗಳನ್ನು ಕೊಂದಿರುವ ಹಿನ್ನೆಲೆ, ಕೃತ್ಯ ಎಸಗಿದ ಸ್ಥಳವನ್ನು ಜಪ್ತಿ ಮಾಡುವ ಬಗ್ಗೆ ವಿಚಾರಣೆಯನ್ನು ಜುಲೈ 12 ರಂದು ಮಧ್ಯಾಹ್ನ 3 ಗಂಟೆಗೆ ಎಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಎಸಿ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆರೋಪಿಯು ತನ್ನ ಅಧಿಕೃತ ಪ್ರತಿನಿಧಿ ಅಥವಾ ವಕೀಲರ ಮೂಲಕ ಆ ದಿನದಂದು ತನ್ನ ವಾದಗಳನ್ನು ಅಥವಾ ಪ್ರತಿವಾದಗಳನ್ನು ಮಂಡಿಸಲು ಅನುಮತಿಸಲಾಗಿದ್ದು, ಇದನ್ನು ಅನುಸರಿಸದಿದ್ದಲ್ಲಿ, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Also Read  ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

error: Content is protected !!
Scroll to Top