ಬಕ್ರೀದ್ ಹಬ್ಬಕ್ಕೆ ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08. ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವು ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

 

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ ಕಾಲೇಜು, ಆಸ್ಪತ್ರೆ ಆವರಣಗಳಲ್ಲಿ ಖುರ್ಬಾನಿಯನ್ನು ನಿಷೇಧಿಸಲಾಗಿದೆ. ಸ್ಥಳೀಯಾಡಳಿತ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿ ನೆರವೇರಿಸಬೇಕು. ಖುರ್ಬಾನಿ ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಬಕ್ರೀದ್ ಆಚರಣೆ ವೇಳೆ ಬಲಿ ನೀಡುವ ಸಂಪ್ರದಾಯಕ್ಕೆ ಹಲವು ನಿರ್ಬಂಧ ವಿಧಿಸಲಾಗಿದೆ. ಅದನ್ನು ಮೀರಿ ಯಾವುದೇ ದನ, ಕರುಗಳು, ಆಕಳು, ಎತ್ತುಗಳನ್ನು ಬಲಿ ನೀಡುವಂತಿಲ್ಲ. ಜೊತೆಗೆ ಬಲಿಗಾಗಿ ಅವುಗಳನ್ನು ಸಾಗಾಣೆ ಮಾಡುವಂತೆಯೂ ಇಲ್ಲ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Also Read  5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು

error: Content is protected !!
Scroll to Top