ಕುಂತೂರು: ಆಟೋ ರಿಕ್ಷಾ – ಟಾಟಾ ಏಸ್ ನಡುವೆ ಅಪಘಾತ ➤ ಕಡಬದ ರಿಕ್ಷಾ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜು.08. ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ಅಪರಾಹ್ನ ನಡೆದಿದೆ.

ಗಾಯಾಳು ಚಾಲಕನನ್ನು ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಸುರತ್ಕಲ್: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಪ್ರಶ್ನಿಸಿದ ಪ್ರಾಂಶುಪಾಲರಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳು

 

 

error: Content is protected !!
Scroll to Top