ಕಡಬ: ಕಿರುಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ನೀರುಪಾಲಾದ ಶಂಕೆ, ದೃಶ್ಯ ಸಿಸಿಟಿವಿಯಲ್ಲಿ ಸೆರೆ



(ನ್ಯೂಸ್ ಕಡಬ) newskadaba.com ಕಡಬ, ಜು.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದೆ.







ಪುತ್ತೂರಿನಿಂದ ಕಾಣಿಯೂರು ಕಡೆಗಡ ತೆರಳುತ್ತಿದ್ದ ಅಪರಿಚಿತ ಕಾರು ತಡರಾತ್ರಿ ವೇಳೆಗೆ ಬೈತಡ್ಕ ಗೌರಿಹೊಳೆಗೆ ಬಿದ್ದಿದ್ದು, ಈ ದೃಶ್ಯವು ಬೈತಡ್ಕ ಜುಮಾ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಯಾರದ್ದು, ಕಾರಿನಲ್ಲಿ ಎಷ್ಟು ಮಂದಿ ಇದ್ದರೆಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

error: Content is protected !!
Scroll to Top