ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಡಾಕ್ಟರ್…!! ➤ ಫೋಕ್ಸೋ ಕಾಯ್ದೆಯಡಿ ದೂರು ದಾಖಲು



(ನ್ಯೂಸ್ ಕಡಬ) newskadaba.com ವಿಟ್ಲ, ಜು. 11. ವೈದ್ಯನೋರ್ವ 14 ವರ್ಷದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯ ಮಾಣಿ ಮೂಲದ ಅನುಷ್ ನಾಯಕ್ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








ಆರೋಪಿ ಎರಡು ಮದುವೆಯಾಗಿದ್ದು, ಮೊದಲ ಪತ್ನಿಯಿಂದ ದೂರವಾಗಿದ್ದಾನೆ ಎನ್ನಲಾಗಿದೆ. ಅಲ್ಲದೇ ಆರೋಪಿ ಅನುಷ್ ಈ ಹಿಂದೆಯೂ ಇಂತಹದೇ ಕೃತ್ಯವೆಸಗಿದ್ದ ಎಂಬ ಆರೋಪವು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top