ಹಾಡಹಗಲೇ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಜು. 11. ಕಾಂಗ್ರೆಸ್ ಮುಖಂಡರೋರ್ವರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.


ಹತ್ಯೆಗೀಡಾದವರನ್ನು ಗಿರೀಶ್ ಕಂಬನೂರ್ (42) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆದರೆ, ಹಳೆ ವೈಷಮ್ಯದ ಹಿನ್ನೆಲೆ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಗಿರೀಶ ರವರು ಶಹಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಿದ್ದ ವೇಳೆ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ದೇಹದ ಮೇಲೆಯೇ ಬಿಟ್ಟು ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ ಶಹಬಾದ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Also Read  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಅಟ್ಟಹಾಸ ➤ ಕೆಲ ಪ್ರದೇಶ ಮತ್ತೆ ಲಾಕ್ಡೌನ್..?

error: Content is protected !!
Scroll to Top