ಕಾಣಿಯೂರು: ಹೊಳೆಗೆ ಕಾರು ಬಿದ್ದು ಯುವಕರಿಬ್ಬರು ಕಣ್ಮರೆ ➤ ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ಕಣ್ಮರೆಯಾಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ಮುಂದುವರೆದಿದ್ದು, ಸ್ಥಳಕ್ಕೆ ಸಚಿವ ಎಸ್. ಅಂಗಾರ ಅವರು ಇಂದು ಭೇಟಿ ನೀಡಿದರು.

ಈ ಸಂದರ್ಭ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಕಡಬ ತಹಶೀಲ್ದಾರ್ ಅನಂತಶಂಕರ್, ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಬೆಳ್ಳಾರೆ ಠಾಣಾಧಿಕಾರಿ ರುಕ್ಮ ನಾಯ್ಕ್, ಪಿಡಿಓ ನಾರಾಯಣ, ಬೆಳಂದೂರು ಗ್ರಾಮಕರಣಿಕ ಪುಷ್ಪರಾಜ್ ಮೊದಲಾದವರು ಜೊತೆಗಿದ್ದರು.

Scroll to Top