(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.