ವಿಟ್ಲ: ಹಾಡಹಗಲೇ ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 13. ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಗಳಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಓರ್ವನ ಇನ್ನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಮರಕ್ಕಿಣಿ ಎಂಬಲ್ಲಿ ಮಂಗಳವಾರದಂದು ಸಂಜೆ ನಡೆದಿದೆ.

ಅಮಲು ಪದಾರ್ಥ ಸೇವಿಸಿದ ವ್ಯಕ್ತಿಯು ಈ ಕೃತ್ಯ ಎಸಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅಡ್ಯನಡ್ಕ ಸಮೀಪದ ಸಾರಡ್ಕ ಎಂಬಲ್ಲಿ ಪೋಲೀಸ್ ಚೆಕ್ ಪೋಸ್ಟ್ ಇದ್ದರೂ ವ್ಯಕ್ತಿಯ ಮೇಲೆ ಈ ದಾಳಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಯ ಹುಟ್ಟಿಸುವಂತೆ ಮಾಡಿದೆ. ಹಲ್ಲೆ ನಡೆಸಿದ ವ್ಯಕ್ತಿಯ ಮೇಲೆ ಈಗಾಗಲೇ ಹಲವು ದೂರು ದಾಖಲಾಗಿದೆ ಎಂಬ ಮಾಹಿತಿಯಿದ್ದು, ಪೊಲೀಸರು ಘಟನಾ ಸ್ಥಳದಿಂದಲೇ ಆತನನ್ನು ವಶಕ್ಕೆ ಪಡೆದಿದ್ದಾರೆ.

Also Read  ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಹಿನ್ನೆಲೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರನ್ನು ತಕ್ಷಣವೇ ಬಂಧಿಸಿ: ಬಿಳಿನೆಲೆ ಬಿಜೆಪಿ ಆಗ್ರಹ

error: Content is protected !!
Scroll to Top