ಚೆಂಬು, ಪೆರಾಜೆ ಗ್ರಾಮದಲ್ಲಿ ಮತ್ತೆ ಭೂಕಂಪನ…!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನರು ಹೇಳಿಕೊಂಡಿದ್ದಾರೆ.


ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ, ಅರಂತೋಡು, ತೊಡಿಕಾನ ಮುಂತಾದೆಡೆ ಇಂದು ಬೆಳಗ್ಗೆ 10.09ರ ವೇಳೆಗೆ ಭೂಮಿಯ ಒಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಮನೆಯಲ್ಲಿನ ವಸ್ತುಗಳೆಲ್ಲ ಅಲುಗಾಡಿವೆ ಎಂಬುದಾಗಿ ಜನರು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top