ಕಡಬ: ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಇನೋವಾ ಕಾರು ನಡುವೆ ಢಿಕ್ಕಿ ➤ ಪವಾಡಸದೃಶ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜು.16. ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.

ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ‌ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.

 

Scroll to Top