ಪುತ್ತೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ ➤ ಮಾಜಿ ಯೋಧ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 18. ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಖಾಸಗಿ ಕಂಪನಿಯ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ವಿದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಜು. 16ರಂದು ಕೆಲಸ ಮುಗಿಸಿ ತನ್ನ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ತನ್ನ ಬೈಕ್‌ನಲ್ಲಿ ಹಿಂಬಾಲಿಸಿ, ತಿಂಗಳಾಡಿ ದರ್ಬೆ ಎಂಬಲ್ಲಿ ಅಡ್ಡಗಟ್ಟಿ ಆಕೆಯೊಂದಿಗೆ ಮಾತನಾಡಲು ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದು, ಬಳಿಕ ಸಾರ್ವಜನಿಕರು ಬರುತ್ತಿರುವುದನ್ನು ಗಮನಿಸಿದ ವಿದೀಪ್ ಸ್ಥಳದಿಂದ ಕಾಲ್ಕಿತ್ತಿದ್ದ ಎನ್ನಲಾಗಿದೆ. ಈ ಕುರಿತು ಸಂಪ್ಯ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Also Read  ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶ

error: Content is protected !!
Scroll to Top