ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯಡಿ ಸಿರಿ ಸಂಸ್ಥೆಯ ಮಳಿಗೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 18. ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಳಿಗೆ ಉದ್ಘಾಟನೆಗೊಂಡಿತು.


ಇದರ ಉದ್ಘಾಟನೆಯನ್ನು ಕುಕ್ಕೇ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಅವರು ನೆರವೇರಿಸಿದರು. ರೈಲ್ವೇ ಸ್ಟೇಷನ್ ಮಾಸ್ಟರ್ ಅಭಿನಂದನ್, ಸ್ಟೇಷನ್ ಮ್ಯಾನೇಜರ್ ಸಂಜೀವ್ ರಂಜನ್, ಸಾಮಾಜಿಕ ಕಾರ್ಯಕರ್ತ ಪ್ರಸಾದ್, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮಾರುಕಟ್ಟೆ ಜನರಲ್ ಮ್ಯಾನೇಜರ್ ಸುಧಾಕರ, ಮಾರುಕಟ್ಟೆ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂದೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಲ್ಲಿನ ಕೇಂದ್ರದಲ್ಲಿ ಸಿರಿ ಸಂಸ್ಥೆಯ ಉತ್ಪನ್ನಗಳು ಪ್ರಯಾಣಿಕರಿಗೆ ಲಭ್ಯವಾಗಲಿದ್ದು, ರೈಲ್ವೇ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಇದು ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಪ್ರಾರಂಭಿಸಿದೆ. ರಾಜ್ಯದ ಮೊದಲ ಕೇಂದ್ರ ಮೈಸೂರಿನಲ್ಲಿ ಆರಂಭಗೊಂಡಿದ್ದು, ಎರಡನೇ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಕೇಂದ್ರ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಉದ್ಘಾಟನೆಗೊಂಡಿದೆ.

Also Read  ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

error: Content is protected !!
Scroll to Top