ದಲಿತ ಮುಖಂಡ ಪಿ.ಡೀಕಯ್ಯರವರ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ನೀಡಿದ ದೂರಿನಂತೆ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರ ಪರೀಕ್ಷೆಯನ್ನು ಸೋಮವಾರದಂದು ನಡೆಸಲಾಯಿತು.

ಪಿ.ಡೀಕಯ್ಯರವರು ಜು. 8 ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದರು ಎಂದು ವರದಿ ಬಂದಿದ್ದವು. ಇದೀಗ ಅವರ ನಿಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ ಹಿನ್ನಲೆ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಡೀಕಯ್ಯ ರವರ ಪತ್ನಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಡೀಕಯ್ಯರವರು ಮನೆಯಲ್ಲಿ ಒಬ್ಬರೇ ಇದ್ದು ಗರ್ಡಾಡಿಯ ಮನೆಯಲ್ಲಿ ಅಸ್ವಸ್ಥರಾಗಿದ್ದಾರೆ. ಬೆಳಿಗ್ಗೆ ಮನೆಯವರು ಬಂದಾಗ ಮನೆಯ ಬಾಗಿಲು ಹಾಕಿದ್ದು ಅವರು ಬಾಗಿಲು ತೆಗೆಯದ ಇದ್ದಾಗ ಮನೆಯ ಬಾಗಿಲನ್ನು ಒಡೆದು ಮನೆಯೊಳಗೆ ಹೋಗಿ ನೋಡಿದಾಗ ಅವರು ಅಡುಗೆ ಕೋಣೆಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ನಿಧನ ಹೊಂದುದ್ದರು. ಇದೀಗ ಕುಟುಂಬಿಕರಿಂದ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಒಟ್ಟು ಘಟನೆಯ ಬಗ್ಗೆ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ಆರಂಭಿಸಿದ್ದು, ಮಹಜರು ನಡೆಸಿ ಬಳಿಕ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಎಂ.ಎಂ, ಎಎಸ್ಐ ದೇವಪ್ಪ , ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೋಲಿಸರು ಉಪಸ್ಥಿತರಿದ್ದರು. ಮಂಗಳೂರಿನ ಹಾಗೂ ಬೆಳ್ತಂಗಡಿಯ ವೈದ್ಯರ ತಂಡ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group