ಉಪ್ಪಿನಂಗಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ಇಂದು ನಡೆದಿದೆ.

ಉಪ್ಪಿನಂಗಡಿಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ 800 ಕಾರು ಹಳೆಗೇಟಿನಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಸಿಫ್ಟ್ ಡಿಸೈರ್ ಕಾರು ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದಿದ್ದು ಮಾರುತಿ 800 ಕಾರು ಸಂಪೂರ್ಣ ನಜುಗುಜ್ಜಾಗಿ ರಸ್ತೆಯಲ್ಲಿ ತಿರುಗಿ ನಿಂತಿದೆ. ಘಟನೆಯಿಂದ ಮಾರುತಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹೆಸರು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Also Read  ವಿವಾದಿತ ಫೇಸ್‌ಬುಕ್‌ ಪೋಸ್ಟ್ ➤ ಸೌದಿಯ ಜೈಲಿನಲ್ಲಿದ್ದ ಮಂಗಳೂರಿನ ಹರೀಶ್ ಬಂಗೇರ ಬಿಡುಗಡೆ

error: Content is protected !!
Scroll to Top