(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.13. ಶ್ರೀ ಕ್ಷೇ.ಧ.ಗ್ರಾ.ಯೋಜನೆ ನೆಲ್ಯಾಡಿ ಒಕ್ಕೂಟ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಗ್ರಾಮ ಪಂಚಾಯತ್ ನೆಲ್ಯಾಡಿ, ಲಯನ್ಸ್ ಕ್ಲಬ್ ಕಡಬ, ಬಂಟರ ಸಂಘ ನೆಲ್ಯಾಡಿ, ಕಿರಣ್ ಮಹಿಳಾ ಒಕ್ಕೂಟ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು (ನಾಳೆ) ನ.14 ಮಂಗಳವಾರದಂದು ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ ಶಿಬಿರವನ್ನು ಉದ್ಘಾಟಿಸಲಿದ್ದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು ತಾಲೂಕು ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಗೌರಿ ಪೈ, ಜಿ.ಪಂ.ಸದಸ್ಯರಾದ ಸರ್ವೋತ್ತಮ ಗೌಡ, ನೇತ್ರಾಧಿಕಾರಿ ಡಾ.ಅನಿಲ್ ರಾಮಾನುಜಂ ಸೇರಿದಂತೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರಾದ ಗಂಗಾಧರ ಶೆಟ್ಟಿ ಹೊಸಮನೆ ತಿಳಿಸಿದ್ದಾರೆ.