ಚಾರ್ಮಾಡಿ ಘಾಟ್ ಎರಡನೇ ತಿರುವಿನಲ್ಲಿ ರಸ್ತೆ ಬಿರುಕು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 18. ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನ ರಸ್ತೆಯ ಮೋರಿಯೊಂದು ಬಿರುಕು ಬಿಟ್ಟಿರುವ ಘಟನೆ ವರದಿಯಾಗಿದೆ.


ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಮರಳು ಮಿಶ್ರಿತ ಕಲ್ಲುಗಳನ್ನು ಹಾಕಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಕುಸಿತಗೊಂಡಿರುವ ಇನ್ನೊಂದು ಭಾಗದಲ್ಲಿ ಕಂದಕ ಇರುವ ಕಾರಣ ಬಸ್, ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Also Read  ಮಂಗಳೂರು: ಟೆಂಪೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿ..! ➤ ಚಾಲಕ ಮೃತ್ಯು

error: Content is protected !!
Scroll to Top