ನೆಲ್ಯಾಡಿ: ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಚಿತ ಶಿಬಿರ ➤ ಮಧುಮೇಹ, ರಕ್ತದೊತ್ತಡ, ಹಿಮೋಗ್ಲೋಬಿನ್ ತಪಾಸಣೆ ಉಚಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.19. ಕಳೆದ ಕೆಲವು ತಿಂಗಳುಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾಮೂಹಿಕ ಉಚಿತ ಮಧುಮೇಹ, ರಕ್ತದೊತ್ತಡ ಹಾಗೂ ಹಿಮೋಗ್ಲೋಬಿನ್ ತಪಾಸಣಾ ಶಿಬಿರ ನಡೆಯಲಿದೆ.

ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಹಾಗೂ ಜೂನಿಯರ್ ಛೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಘಟಕದ ಸಹಯೋಗದೊಂದಿಗೆ ನೆಲ್ಯಾಡಿಯ ಅವನಿ ಕಾಂಪ್ಲೆಕ್ಸ್ ನಲ್ಲಿರುವ ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಈ ಶಿಬಿರವು ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕರಾದ ಜೇಸಿ. ಕಾಶೀನಾಥ್ ಗೋಗಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ

 

 

error: Content is protected !!
Scroll to Top