(ನ್ಯೂಸ್ ಕಡಬ) newskadaba.com ಕಡಬ, ಜು. 19. ಇಲ್ಲಿನ ಪಟ್ಟಣ ಪಂಚಾಯತ್ ಗೆ ಇಂದು ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು.
ಈ ಸಂದರ್ಭ ಸವಣೂರು ಕಂಚಿಕಾರ ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಾಯಿತು. ಪ್ರಕರಣ ಕೋರ್ಟಿನಲ್ಲಿ ಇದ್ದರೂ ಅದನ್ನು ಒತ್ತುವರಿ ಮಾಡಿಕೊಂಡಿರುವ ಪ್ರಭಾವಿ ವ್ಯಕ್ತಿಗಳು ಅದರಲ್ಲಿ ಕೃಷಿ ಚಟುವಟಿಕೆ ಮಾಡುತ್ತಿರುವ ಬಗ್ಗೆ ಲೋಕಾಯುಕ್ತರಿಗೆ ತಿಳಿಸಿದಾಗ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಇನ್ಸ್‌ಪೆಕ್ಟರ್ ಅಮಾನುಲ್ಲ, ಲೋಕಾಯುಕ್ತಾ ಸಿಬ್ಬಂದಿಗಳಾದ ಸುರೇಂದ್ರ, ಗಾಯತ್ರಿ, ಶರತ್, ಪಂಪಣ್ಣ, ಕಡಬ ತಹಶೀಲ್ದಾರ್ ಅನಂತಶಂಕರ್ ಬಿ, ತಾ.ಪಂ. ಇ.ಒ. ನವೀನ್ ಕುಮಾರ್ ಭಂಡಾರಿ, ಉಪತಹಶೀಲ್ದಾರ್ ಮನೋಹರ್ ಕೆ.ಟಿ, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ, ತಾ.ಪಂ.ವ್ಯವಸ್ಥಾಪಕ ಆನಂದ ಗೌಡ, ಭೂಮಾಪಕ ಚಂದ್ರಶೇಖರ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.