ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜು. 19. ವಿಷ ಸೇವಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೇಮಿಗಳಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.


ಮೃತರನ್ನು ಉತ್ತರಕನ್ನಡ ಜಿಲ್ಲೆ ಹಳಿಯಾಳ ಮೂಲದ ಜ್ಯೋತಿ ಸುರೇಶ ಅಂತ್ರೋಳಕರ(19) ಹಾಗೂ ರಿಕೇಶ್​ ಸುರೇಶ ಮಿರಾಶಿ(20) ಎಂದು ಗುರುತಿಸಲಾಗಿದೆ. ಹಳಿಯಾಳದ ಹವಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತಿಂಗಳ ಹಿಂದೆ ಯುವತಿಯ ಪೋಷಕರು ಆಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆ ಮಾಡಿದ್ದರು. ಆದರೆ, ಪ್ರಿಯಕರನನ್ನು ಬಿಟ್ಟು ಬದುಕಲಾಗದೆ ಜ್ಯೋತಿ ಜುಲೈ 15ರಂದು ಪ್ರಿಯಕರ ರಿಕೇಶ್​ ಜತೆ ವಿಷ ಸೇವಿಸಿದ್ದು, ನಾಲ್ಕು ದಿನ ಸಾವು-ಬದುಕಿನ ನಡುವೆ ಹೋರಾಡಿದ ಪ್ರೇಮಿಗಳು ಇಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು

error: Content is protected !!
Scroll to Top