ಲಾರಿ-ಬೈಕ್ ಢಿಕ್ಕಿ: ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.13. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಕಡಂಬು ಎಂಬಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಸವಾರನನ್ನು ಕಡೇಶಿವಾಲಯ ನಿವಾಸಿ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಗುರುಪ್ರಸಾದ್ ಎಂದ್ ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಕಡೇಶಿವಾಲಯದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top