ಕಂಬಳದ ಓಟಗಾರ ಶ್ರೀನಿವಾಸ್ ಗೌಡ ಸಹಿತ ಮೂವರ ವಿರುದ್ದ ಕ್ರಿಮಿನಲ್ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಕಂಬಳದ ಹುಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ, ಗುಣಪಾಲ ಕಡಂಬ ಮತ್ತು ರತ್ನಾಕರ ಎಂಬವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಹುಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹವಾಗಿದ್ದು, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಲೋಕೇಶ್ ಶೆಟ್ಟಿ ಆರೋಪಿಸಿದ್ದಾರೆ. ಇನ್ನು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ್ ವಿರುದ್ದ ಕೂಡಾ ದೂರು ದಾಖಲಾಗಿದ್ದು, ಅಧಿಕೃತ ಮಾನ್ಯತೆ ಪಡೆಯದ, ನಂಬಿಕೆಗೆ ಅರ್ಹವಲ್ಲದ ಸ್ಕೈ ವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ಸೃಷ್ಟಿಸಲಾಗಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಲೋಕೇಶ್ ಶೆಟ್ಟಿಯವರು ತಿಳಿಸಿದ್ದಾರೆ.

Also Read  ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

error: Content is protected !!
Scroll to Top