ಬೆಳ್ಳಾರೆ: ತಂಡದಿಂದ ಗಾಯಗೊಂಡಿದ್ದ ಯುವಕ ಮೃತ್ಯು ➤ ಬೆಳ್ಳಾರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬೆಳ್ಳಾರೆ, ಜು.21. ಬೆಳ್ಳಾರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳಂಜದಲ್ಲಿ ತಂಡದಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಸೂದ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ತಿಳಿದುಬಂದಿದೆ.

ಗಂಭೀರ ಗಾಯಗೊಂಡಿದ್ದ ಮಸೂದ್‌ ಅವರನ್ನು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

Scroll to Top