ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

(ನ್ಯೂಸ್ ಕಡಬ) newskadabacom ನವದೆಹಲಿ, ಜು.21. ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎನ್​​ಡಿಎ ಅಭ್ಯರ್ಥಿ ಜಾರ್ಖಂಡ್ ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ.

ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾ ಮೂಲದ ಮುರ್ಮು ಪಾತ್ರರಾಗಿದ್ದಾರೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿದ್ದು ಇಂದು ಮತ ಎಣಿಕೆ ನಡೆದಿದೆ. ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆಯಲ್ಲಿಯೇ ಮುರ್ಮ ಮುನ್ನಡೆ ಸಾಧಿಸಿದ್ದರು. ಮುರ್ಮ ಅವರಿಗೆ 540 ಮತಗಳು ಲಭಿಸಿದ್ದು ಒಟ್ಟು ಮತದ ಮೌಲ್ಯ 3,78,000 ಆಗಿದೆ. ಅದೇ ವೇಳೆ ಯಶವಂತ ಸಿನ್ಹಾ ಅವರಿಗೆ 1,45,600 ಮೌಲ್ಯದ 208 ಮತಗಳು ಲಭಿಸಿದೆ. 15 ಮತಗಳು ಅಸಿಂಧುವಾಗಿವೆ.

Also Read  ಕಡಬ: ಪೊಲೀಸ್ ಸಿಬ್ಬಂದಿಯ ಅತ್ಯಾಚಾರ ಸುದ್ದಿ ವೈರಲ್ ➤ ದೂರು ಬಂದಲ್ಲಿ ಸೂಕ್ತ ಕ್ರಮ: ಡಿವೈಎಸ್ಪಿ ಗಾನ ಪಿ.ಕುಮಾರ್

 

 

error: Content is protected !!
Scroll to Top