ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆ ➤ 747 ವೆಬ್ ಸೈಟ್ ಹಾಗೂ 94 ಯೂಟ್ಯೂಬ್ ಚಾನೆಲ್ ಸ್ಥಗಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್ ಚಾನೆಲ್‍ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ 2021-22 ರಲ್ಲಿ ದೇಶದಲ್ಲಿ 747 ವೆಬ್‍ಸೈಟ್‍ಗಳು, 94 ಯೂಟ್ಯೂಬ್ ಚಾನೆಲ್‍ಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.


ಈ ಕುರಿತು ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು, ಸುಳ್ಳು ಸುದ್ದಿಗಳನ್ನು ಅಂತರ್ಜಾಲದಲ್ಲಿ ಹರಡುವ ಮೂಲಕ ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರಕಾರ ಬಲವಾಗಿ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಸೆಕ್ಷನ್ 69ಎ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಅಡಿಯಲ್ಲಿ 94 ಯೂಟ್ಯೂಬ್ ಚಾನೆಲ್‍ಗಳು, 19 ಸಾಮಾಜಿಕ ಮಾಧ್ಯಮ ಖಾತೆ ಮತ್ತು 747 ಯುಆರ್‍ಎಲ್‍ಗಳ ವಿರುದ್ಧ ಸಚಿವಾಲಯವು ಕ್ರಮ ಕೈಗೊಂಡಿದೆ ಮತ್ತು ಅವುಗಳನ್ನು ನಿರ್ಬಂಧಿಸಿದೆ ಎಂದು ಹೇಳಿದರು.

Also Read  ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್

error: Content is protected !!
Scroll to Top