ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆ ➤ 747 ವೆಬ್ ಸೈಟ್ ಹಾಗೂ 94 ಯೂಟ್ಯೂಬ್ ಚಾನೆಲ್ ಸ್ಥಗಿತ – News Kadaba

ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆ ➤ 747 ವೆಬ್ ಸೈಟ್ ಹಾಗೂ 94 ಯೂಟ್ಯೂಬ್ ಚಾನೆಲ್ ಸ್ಥಗಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್ ಚಾನೆಲ್‍ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ 2021-22 ರಲ್ಲಿ ದೇಶದಲ್ಲಿ 747 ವೆಬ್‍ಸೈಟ್‍ಗಳು, 94 ಯೂಟ್ಯೂಬ್ ಚಾನೆಲ್‍ಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.


ಈ ಕುರಿತು ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು, ಸುಳ್ಳು ಸುದ್ದಿಗಳನ್ನು ಅಂತರ್ಜಾಲದಲ್ಲಿ ಹರಡುವ ಮೂಲಕ ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರಕಾರ ಬಲವಾಗಿ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಸೆಕ್ಷನ್ 69ಎ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಅಡಿಯಲ್ಲಿ 94 ಯೂಟ್ಯೂಬ್ ಚಾನೆಲ್‍ಗಳು, 19 ಸಾಮಾಜಿಕ ಮಾಧ್ಯಮ ಖಾತೆ ಮತ್ತು 747 ಯುಆರ್‍ಎಲ್‍ಗಳ ವಿರುದ್ಧ ಸಚಿವಾಲಯವು ಕ್ರಮ ಕೈಗೊಂಡಿದೆ ಮತ್ತು ಅವುಗಳನ್ನು ನಿರ್ಬಂಧಿಸಿದೆ ಎಂದು ಹೇಳಿದರು.

Scroll to Top