ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಫೋಟ ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಹರಿಯಾಣ, ಜು. 22. ಯುವಕನೋರ್ವ ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಪೋಟಗೊಂಡ ಘಟನೆ ಹರಿಯಾಣದಿಂದ ವರದಿಯಾಗಿದೆ.

ಯುವಕ ಮೊಬೈಲ್ ಚಾರ್ಜ್ ಮಾಡಿದ ಬಳಿಕ ಮೊಬೈಲನ್ನು ತನ್ನ ಪ್ಯಾಂಟ್‌ ಜೇಬಿನಲ್ಲಿ ಇಟ್ಟುಕೊಂಡಿದ್ದು, ಸ್ವಲ್ಪ ಸಮಯದಲ್ಲೇ ಅದು ಸ್ಫೋಟಗೊಂಡ ಪರಿಣಾಮ ಕಾಲಿಗೆ ಗಾಯವಾಗಿದೆ. ಕೂಡಲೇ ಯುವಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ತಿಳಿದುಬಂದಿದೆ.

Scroll to Top