ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್ ವೈ ➤ ಇನ್ಮುಂದೆ ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ…!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು. 22. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಶಿಕಾರಿಪುರದ ಅಂಜನಾಪುರ ಡ್ಯಾಮ್ ಗೆ ಬಾಗಿನ ಸಲ್ಲಿಸಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಶಿಕಾರಿಪುರ ತಾಲೂಕಿನ ಜನತೆ ನನಗಿಂತ ಹೆಚ್ಚು ಮತಗಳ ಅಂತರದಿಂದ ವಿಜಯೇಂದ್ರನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಹಳೆ ಮೈಸೂರು ಭಾಗದಿಂದ ಸ್ಪರ್ಧಿಸುವಂತೆ ಒತ್ತಡ ಕೇಳಿಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಳೇ ಮೈಸೂರು ಭಾಗದಿಂದ ಸ್ಪರ್ಧಿಸುವಂತೆ ಒತ್ತಡ ಇದೆ. ಆದರೆ ನಾನು‌ ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಬಿ.ವೈ ವಿಜಯೆಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದರು.

Also Read  ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ► ಪತ್ರಕರ್ತ ರವಿ ಬೆಳಗೆರೆಗೆ ಜೈಲು

error: Content is protected !!
Scroll to Top