ಯುವಕನ ಹೆಸರಿನಲ್ಲಿ ಮಂಗಳಮುಖಿ ಚಾಟಿಂಗ್ ➤ ವಿಟ್ಲ ಠಾಣಾ ಮೆಟ್ಟಿಲೇರಿದ ಯುವತಿಯ ಫೇಸ್ ಬುಕ್ ಲವ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಯುವತಿಗೆ ಫೇಸ್ ಬುಕ್ ಮೂಲಕ ವ್ಯಕ್ತಿಯೊಬ್ಬರ ಪರಿಚಯವಾಗಿ ಬಳಿಕ ಅದು ಪ್ರೀತಿಗೆ ತಿರುಗಿ ಕೊನೆಗೆ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಯುವತಿಗೆ ನಾಲ್ಕು ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಪ್ರದೀಪ್ ಎಂಬಾತನ ಪರಿಚಯವಾಗಿತ್ತು. ಆತನ ಮುಖ ನೋಡದೆ ಇದ್ದರೂ, ಆತನ ಪ್ರೀತಿಯ ಮಾತಿಗೆ ಮರುಳಾಗಿ ಯುವತಿ ಪ್ರೇಮಪಾಶಕ್ಕೆ ಸಿಲುಕಿದ್ದಳು. ಆತ ದಿನಾ ಕರೆ ಮಾಡಿ ಮದುವೆಯಾಗುವುದಾಗಿ ನಂಬಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಯುವತಿ ಮನೆಮಂದಿಯೊಂದಿಗೆ ಜಗಳವಾಡುತ್ತಿದ್ದು, ಈ ಬಗ್ಗೆ ಯುವತಿಯ ತಾಯಿಯು ವಕೀಲೆ ಶೈಲಜಾ ರಾಜೇಶ್ ಅವರಲ್ಲಿ ವಿಷಯ ತಿಳಿಸಿದ್ದರು. ಅವರು ಯುವತಿಯನ್ನು ಕೌನ್ಸೆಲಿಂಗ್ ನಡೆಸಿದಾಗ ಆಕೆ ಸಂಪೂರ್ಣವಾಗಿ ಪ್ರದೀಪ್ ನ ಮೋಹಕ್ಕೆ ಒಳಗಾಗಿದ್ದಳು. ಎಷ್ಟೇ ಮನವರಿಕೆ ಮಾಡಿದರೂ ಮಾತು ಕೇಳದಿದ್ದಾಗ ಶೈಲಜಾ ರಾಜೇಶ್ ಸೂಚನೆಯಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ವತಃ ಶೈಲಜಾ ರಾಜೇಶ್ ಅವರು ಪೊಲೀಸರ ಸಹಕಾರದೊಂದಿಗೆ ಯುವಕನ ಮನೆಗೆ ಭೇಟಿ ನೀಡಿದಾಗ ಗಂಡಸಿನ ಧ್ವನಿಯಲ್ಲಿ ಮಾತನಾಡುತ್ತಿರುವುದು ಜ್ಯೋತಿ ಎಂಬ ಮಂಗಳಮುಖಿ ಎಂಬ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಅಂತೂ ನಾಲ್ಕು ವರ್ಷದಿಂದ ಮನೆಯವರಿಗೆ ತಲೆನೋವಾಗಿದ್ದ ಯುವತಿಯ ಪ್ರೇಮ ಪ್ರಕರಣ ದುರಂತ ಅಂತ್ಯ ಕಂಡಿದೆ.

Also Read  ಉದ್ಘಾಟನೆಗೊಂಡ 24 ಗಂಟೆಗಳೊಳಗೆ ಇಂದಿರಾ ಕ್ಯಾಂಟೀನ್ ಹಾನಿಗೊಳಿಸಿದ ದುಷ್ಕರ್ಮಿಗಳು

error: Content is protected !!
Scroll to Top