ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಜು. 23. ಅಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಮಾಣಿಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಭಾಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅಲ್ಪ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Also Read  ಟೆಂಡರ್ ಆಹ್ವಾನ

error: Content is protected !!
Scroll to Top