ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!!



(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 23. ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ.







ಮೃತರನ್ನು ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಜು. 20ರಂದು ಬೆಳಿಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top