ಪುತ್ತೂರು ಮೂಲದ ಕಾರು ಚಿಕ್ಕಮಗಳೂರಿನಲ್ಲಿ ಅಪಘಾತ ➤ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮೂಡಿಗೆರೆ, ಜು. 24. ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ಭಾನುವಾರದಂದು ನಡೆದಿದೆ.

ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಹೋಗಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ. ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top