ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ಆಲ್ಟೋ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮದೆನಾಡು ಎಂಬಲ್ಲಿ ಸಂಭವಿಸಿದೆ.

ಗಾಯಗೊಂಡವರನ್ನು ಸುಳ್ಯ ಜಯನಗರದ ಸಿನಾನ್, ಅತಾವುಲ್ಲಾ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೊ ಕಾರು ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ
ಈ ಅಪಘಾತ ಸಂಭವಿಸಿದೆನ್ನಲಾಗಿದೆ.

Scroll to Top