ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ➤ ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.25. ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್‌.ಕೆ. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಬಿ. ಹರಿಪ್ರಸಾದ್ ರೈ ಅವರು ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ನೆಲ್ಯಾಡಿ ಘಟಕದ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪಿ.ಬಿ.ಹರಿಪ್ರಸಾದ್ ರೈ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Also Read  ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ

ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ ಸನ್ಮಾನಿತರನ್ನು ಪರಿಚಯಿಸಿದರು. ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾರನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ಉಪಸ್ಥಿತರಿದ್ದರು. ಸ್ವಾತಿ ಬಾಳ್ತಿಲ್ಲಾಯ ವಂದಿಸಿದರು. ದಯಾನಂದ ಕಲ್ನಾರ್ ಕಾರ್ಯಕ್ರಮ ನಿರೂಪಿಸಿದರು.

 

error: Content is protected !!
Scroll to Top