ಜು. 30ರಂದು ಸಿಇಟಿ ಫಲಿತಾಂಶ ಪ್ರಕಟ ➤ ಸಿಎನ್ ಅಶ್ವತ್ಥನಾರಾಯಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. 2022ನೇ ಸಾಲಿನ ಸಿಇಟಿ ಫಲಿತಾಂಶವನ್ನು ಜು. 30ರಂದು ಪ್ರಕಟಿಸಲಾಗುವುದು ಎಂದು ಡಾ.ಸಿ.ಎನ್ ಅಶ್ವತ್ಥನಾರಾಯಣ ರವರು ಘೋಷಿಸಿದ್ದಾರೆ.


ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಳ್ಳಲು ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿದ್ದು, ಇದರ ಫಲಿತಾಂಶವು ಜು. 30ರ ಶನಿವಾರದಂದು ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

Also Read  ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು

error: Content is protected !!
Scroll to Top