ಮಂಗಳೂರು: ಪಬ್ ಮೇಲೆ ಬಜರಂಗದಳ ಕಾರ್ಯಕರ್ತರಿಂದ ದಾಳಿ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ನಗರದ ಬಲ್ಮಠದಲ್ಲಿರುವ ಪಬ್‌ವೊಂದಕ್ಕೆ ಬಜರಂಗ ದಳದ ಕಾರ್ಯಕರ್ತರ ತಂಡವೊಂದು ದಾಳಿ ನಡೆಸಿದ ಘಟನೆ ಘಟನೆ ಸೋಮವಾರ ರಾತ್ರಿ ನಡೆದಿದೆ.


ಪಬ್‌ನಲ್ಲಿ ವಿದ್ಯಾರ್ಥಿಗಳು ‌ಪಾರ್ಟಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಒತ್ತಾಯಿಸಿದ್ದು, ಅಲ್ಲದೇ ವಿದ್ಯಾರ್ಥಿಗಳನ್ನು ಹೊರಹೋಗುವಂತೆ ಒತ್ತಾಯಿಸಿದರು ಎಂದು ಆರೋಪಿಸಲಾಗಿದೆ‌. ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ದಿ ಲಾಂಜ್ ಎಂಬ ಪಬ್‌ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದು, ಪಾರ್ಟಿ ಮಾಡುತ್ತಿದ್ದವರನ್ನು ವಾಪಸ್ ಕಳಿಸಿದ್ದಾರೆ ಎಂದು ದೂರಲಾಗಿದೆ. 2009 ರ ಪಬ್ ದಾಳಿ ನಡೆದ ಅದೇ ಪಬ್ ಮೇಲೆ ಈಗ ಮತ್ತೆ ದಾಳಿ ನಡೆದಿದ್ದು, ಈಗ ಅದು ರಿಸೈಕಲ್ ಎಂದು ಹೆಸರು ಬದಲಾಯಿಸಿದೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬಜರಂಗ ದಳದ ಕಾರ್ಯಕರ್ತರನ್ನು ಹೊರಗೆ ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.

Also Read  ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ

 

error: Content is protected !!
Scroll to Top