ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಹೆಸರಿನಲ್ಲಿ ಮೋಜಿನ ಪ್ರವಾಸ ➤ ಆಮ್ ಆದ್ಮಿ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಆಲಂಕಾರು, ಜು. 26. ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸಹಕಾರಿ ಸಂಘವೊಂದರ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದರು.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ. ಅಲ್ಲದೇ ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದರು.

Also Read  'ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಮರಳು ಬುಕ್ಕಿಂಗ್

error: Content is protected !!
Scroll to Top