ಮಂಗಳೂರು: ಆ. 01ರಿಂದ ಮೀನುಗಾರಿಕೆ ಮರು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮಂಗಳೂರಿನಲ್ಲಿ ಎರಡು ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮರು ಆರಂಭಗೊಳ್ಳಲಿದ್ದು, ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ.


ದೋಣಿಗಳಲ್ಲಿ ದುಡಿಯುವವರ ಪೈಕಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು, ರಜೆಯಲ್ಲಿ ತೆರಳಿದವರು ಮರಳಿ ಬರುತ್ತಿದ್ದಾರೆ. ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದ್ದು, ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

Also Read  ನಿಮ್ಮ ಪ್ರೀತಿಯ ಸಂಬಂಧವನ್ನು ಪಡೆಯುವ ಸರಳ ಮಾರ್ಗ

error: Content is protected !!
Scroll to Top