ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ರಾಷ್ಟ್ರೀಯ ಶಿಕ್ಷಣ ನೀತಿ- 2020″ರ ಕುರಿತು ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಕುಂತೂರು, ಜು. 26. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ನೂತನ “ರಾಷ್ಟ್ರೀಯ ಶಿಕ್ಷಣ ನೀತಿ-2020” ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಯಿತು.

ವಿಚಾರ ಸಂಕಿರಣವನ್ನು ಕಾಲೇಜಿನ ವ್ಯವಸ್ಥಾಪಕಾದ ರೆ|ಡಾ|ಫಾ| ಎಲ್ದೊ ಪುತ್ತನ್‍ಕಂಡತ್ತಿಲ್ ಅಧ್ಯಕ್ಷತೆ ವಹಿಸಿ, ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಗತ್ಯತೆ ಮತ್ತು ಅದರ ಸರಿಯಾದ ಅನುಷ್ಠಾನದ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಯುತ ಡಾ| ರವಿ ಎಂ.ಎಸ್ ಇವರು ವಿಚಾರ ಸಂಕಿರಣವನ್ನು ಉದ್ಘಾಟಿಸಿ, ದೇಶದ ಭವಿಷ್ಯ ರೂಪುಗೊಳ್ಳಲು ಪೂರಕವಾದ ಶೈಕ್ಷಣಿಕ ಕ್ಷೇತ್ರದ ಗುಣಮಟ್ಟವನ್ನು ಸುಧಾರಿಸಲು ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾದ ನೂತನ “ರಾಷ್ಟ್ರೀಯ ಶಿಕ್ಷಣ ನೀತಿಯ” ಕುರಿತು ಹಿನ್ನೆಲೆ, ಪ್ರಸ್ತುತತೆ, ಉದ್ದೇಶ ಹಾಗೂ ವಿವಿಧ ಹಂತಗಳಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವ ಕುರಿತಂತೆ ಸವಿವರವಾದ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್ ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ವಿಚಾರ ಸಂಕಿರಣದಲ್ಲಿ ಸಂಘದ ಸಂಯೋಜಕರಾದ ಪ್ರಾಧ್ಯಾಪಕರು ಶ್ರೀಯುತ ರಘುನಂದನ. ಕೆ ಸ್ವಾಗತಿಸಿ, ಸಂಘದ ಅಧ್ಯಕ್ಷೆ ಪ್ರಶಿಕ್ಷಣಾರ್ಥಿ ಕು| ಜೆಸ್ಲಿನ್ ಜೋಸೆಫ್ ವಂದಿಸಿ, ಕು| ಅನುಶ್ರೀ ಕೆ. ಎಸ್ ಕಾರ್ಯಕ್ರಮ ನಿರೂಪಿಸಿದರು.

Also Read  ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

error: Content is protected !!
Scroll to Top