ನೆಲ್ಯಾಡಿ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ➤ 9ನೇ ತರಗತಿಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.26. ವಿದ್ಯುತ್ ಶಾಕ್ ತಗುಲಿದ ಪರಿಣಾಮ 9ನೇ ತರಗತಿಯ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತ ಬಾಲಕನನ್ನು ಅಡ್ಡಹೊಳೆ ನಿವಾಸಿ ತೋಮ್ಸನ್ ಹಾಗೂ ವೀಣಾ ದಂಪತಿಯ ಪುತ್ರ, ಉದನೆ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ರೂಪೇಶ್(15) ಎಂದು ಗುರುತಿಸಲಾಗಿದೆ. ರೂಪೇಶ್ ತನ್ನ ಮನೆಯಲ್ಲಿ ಚಾರ್ಜಿಗಿಟ್ಟಿದ್ದ ಮೊಬೈಲನ್ನು ತೆಗೆದು ಚಾರ್ಜರನ್ನು ಬೇರ್ಪಡಿಸುವ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Scroll to Top