ಬೆಳ್ಳಾರೆ: ಬಿಜೆಪಿ ಯುವ ಮುಖಂಡನಿಗೆ ಅಪರಿಚಿತ ತಂಡದಿಂದ ಚೂರಿ ಇರಿತ



(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 26. ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.







ಗಾಯಾಳುವನ್ನು ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಎಂದು ಗುರುತಿಸಲಾಗಿದೆ. ಪ್ರವೀಣ್ ಮೇಲೆ ದುಷ್ಕರ್ಮಿಗಳ ಗುಂಪು ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿಯ ಮಾಸ್ತಿಕಟ್ಟೆ ಎಂಬಲ್ಲಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ ಪೋಲಿಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.






 

error: Content is protected !!
Scroll to Top