ಬೆಳ್ಳಾರೆ: ಚೂರಿ ಇರಿತಕ್ಕೊಳಗಾದ ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 26. ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೃತ ಯುವಕ ಎಂದು ತಿಳಿದುಬಂದಿದೆ. ಪ್ರವೀಣ್ ರವರು ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಪ್ರವೀಣ್ ರವರು ಅವರ ಸ್ವಂತ ಅಂಗಡಿ ಮುಂಭಾಗ ನಿಂತಿದ್ದ ವೇಳೆ ಬೈಕ್ ನಲ್ಲಿ ಮುಸುಕು ಧರಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದು, ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಪ್ರವೀಣ್ ನೆಟ್ಟಾರುರವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

Scroll to Top