ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು. ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತಹ ಪಿಎಫ್ಐ ಹಾಗೂ ಎಸ್ಡಿಪಿಐ ನಾಯಕರನ್ನು ಬಂಧಿಸಬೇಕು. ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Also Read  ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…!

 

error: Content is protected !!
Scroll to Top