ಉಳ್ಳಾಲ: ಮಲತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 27.ಮಲತಂದೆಯೋರ್ವ 9 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಠಾಣಾ ಪೊಲೀಸರ ಆರೋಪಿಯ್ನ ನಡೆದಿದೆ.

ಬಂಧಿತ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ಕೇರಳ ಗಡಿಭಾಗದ ವಿವಾಹಿತ ಮಹಿಳೆಯನ್ನು ಮದುವೆಯಾಗಿದ್ದು, ಆಕೆಗೆ ಒಂಬತ್ತು ವರ್ಷದ ಮಗಳಿದ್ದು, ಒಟ್ಟಿಗೆ ಪಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇದೀಗ ಮಹಿಳೆ ಗರ್ಭಿಣಿಯಾಗಿದ್ದು, ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭ ಅಶ್ವತ್ಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ವೇಳೆ ಮಲತಂದೆಯು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ವಿಪರೀತ ರಕ್ತಸ್ರಾವವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು‌ ಪಾಂಡೇಶ್ವರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Scroll to Top