ಪ್ರವೀಣ್ ಹತ್ಯೆ ಪ್ರಕರಣ – ಆರೋಪಿಗಳ ಪತ್ತೆಗೆ ಐದು ತಂಡ ರಚನೆ ➤ ಶಂಕಿತ ಹಲವರ ತೀವ್ರ ವಿಚಾರಣೆ

(ನ್ಯೂಸ್ ಕಡಬ) newskadaba.com ಕಡಬ, ಜು‌.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಆರಂಭಗೊಂಡಿದ್ದು, ಆರೋಪಿಗಳ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ.

ಶಂಕಿತ ಆರೋಪದ ಮೇರೆಗೆ ಸ್ಥಳೀಯ ಹಲವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ಪ್ರಮುಖ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಆರೋಪಿಗಳು ಕೇರಳ ನೋಂದಣಿಯ ಬೈಕ್ ನಲ್ಲಿ ಆಗಮಿಸಿದ್ದಾರೆಂಬ ಗುಮಾನಿ ಇರುವುದರಿಂದ ತನಿಖೆಯನ್ನು ಕೇರಳ ಕಡೆಗೂ ಕೇಂದ್ರೀಕರಿಸಲಾಗಿದೆ. ಬೆಳ್ಳಾರೆ ಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Also Read  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಘಟಕ ರಚನೆ ➤ ಅಧ್ಯಕ್ಷರಾಗಿ ನಿಂಗರಾಜು, ಪ್ರ.ಕಾರ್ಯದರ್ಶಿಯಾಗಿ ಸೀತಾರಾಮ ಕೆ.ಜಿ ಪಲ್ಲತ್ತಾರು ಆಯ್ಕೆ

 

 

error: Content is protected !!
Scroll to Top