ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ತುರ್ತು ಸಭೆ ಕರೆದ ಸಿಎಂ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಜುಲೈ 26ರಂದು ರಾತ್ರಿ ನಡೆದ ಸುಳ್ಯ ತಾಲೂಕು ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರೂ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯೂ ಬಿಜೆಪಿ ಯುವಮೋರ್ಛಾದ ದ.ಕ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರೂ ಆಗಿದ್ದ ಯುವ ಉದ್ಯಮಿ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ.

 


ಬೆಂಗಳೂರಿನ ‘ಕೃಷ್ಣಾ’ದಲ್ಲಿ ಇದೀಗ ಸಭೆ ನಡೆಯಲಿದ್ದು, ಗೃಹಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತುರ್ತುಸಭೆಯಲ್ಲಿ ಚರ್ಚೆ ನಡೆಯಲಿದೆ.

Also Read  ಮುಖ್ಯಮಂತ್ರಿಗಳ ಸಭೆಯಲ್ಲಿ ಸಮರ್ಪಕ ಮಾಹಿತಿ ಒದಗಿಸಲು ಸೂಚನೆ

error: Content is protected !!
Scroll to Top