(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.27. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳ – ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಬಿಗುಗೊಳಿಸಲಾಗಿದೆ.
ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೇರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಗಾ ಇರಿಸಲಾಗಿದೆ. ವಾಹನ ಸಂಚಾರ ವಿರಳವಾಗಿದ್ದು, ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಈಗಾಗಲೇ ಬೆಳ್ಳಾರೆಗೆ ಆಗಮಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. 10 ಮಂದಿ ಶಂಕಿತರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.