ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 28. ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ.

ಮೃತರನ್ನು ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜದ ಆನಂದ (40) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಕೊಯ್ಯಲೆಂದು ಮರವೇರಿದ್ದ ಇವರು, ಅಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top