ದ.ಕ ಜಿಲ್ಲೆಯಾದ್ಯಂತ ಜು. 29ರ ಮಧ್ಯರಾತ್ರಿವರೆಗೆ ಮದ್ಯದಂಗಡಿ ಮುಚ್ಚಲು ಆದೇಶ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 28. ಪ್ರವೀಣ್ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮತ್ತು ಜು.29 ರಂದು ಎಲ್ಲಾ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ರವರು ಆದೇಶ ನೀಡಿದ್ದಾರೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಸದ್ರಿ ಪ್ರಕ್ಷುಬ್ಧ ವಾತಾವರಣವು ಇತರ ಸ್ಥಳಗಳಿಗೂ ಪ್ರಸರಿಸುವ ಸಾಧ್ಯತೆಗಳಿದ್ದು, ಈ ಸಮಯದಲ್ಲಿ ಮದ್ಯಪಾನದ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡುವ ಸಾಧ್ಯತೆಗಳಿರುವ ಹಿನ್ನೆಲೆ ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಅದೇ ರೀತಿ ಪ್ರತಿಯೊಂದು ತಾಲೂಕಿನ ಬಾರ್ ಮತ್ತು ವೈನ್ ಶಾಪ್ ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲ್)ಗಳನ್ನು ಕಡ್ಡಾಯವಾಗಿ ವ್ಯವಸ್ಥಿತಗೊಳಿಸುವಂತೆ ತಿಳಿಸಿದ್ದಾರೆ.

Also Read  ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

error: Content is protected !!
Scroll to Top